Monday, April 12, 2021

ವಂದೇ ಭಾರತ್ ಏರ್ ಲಿಫ್ಟ್ : ಇಂದು ನಾಲ್ಕು ವಿಮಾನಗಳ ಆಗಮನ

ನವದೆಹಲಿ:  ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಕರೆ ತರಲು ಆರಂಭಿಸಲಾಗಿರುವ ವಂದೇ  ಭಾರತ್ ಕಾರ್ಯಾಚರಣೆ ಮೂರನೆ ದಿನಕ್ಕೆ ಕಾಲಿರಿಸಿದೆ. ಇಂದು ನಾಲ್ಕು ವಿಮಾನಗಳು  ಭಾರತಕ್ಕೆ ಆಗಮಿಸಲಿವೆ.  ಢಾಕಾದಿಂದ ಬರಲಿರುವ ವಿಮಾನ ದೆಹಲಿಯಲ್ಲಿ,  ಕುವೈಟ್ ನಿಂದ ಆಗಮಿಸಲಿರುವ ವಿಮಾನ ಹೈದರಾಬಾದ್ ನಲ್ಲಿ  ಮತ್ತು ಮಸ್ಕತ್ ನಿಂದ ಹೊರಡಲಿರುವ ವಿಮಾನ ಕೊಚ್ಚಿಯಲ್ಲಿ ಇಳಿಯಲಿದೆ. ಶಾರ್ಜದಿಂದ ಭಾರತೀಯರನ್ನು ಕರೆ ತರಲಿರುವ ವಿಮಾನ ಲಕ್ನೋ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.  ಕಳೆದ ಎರಡು ದಿನ ಅತೀ ಹೆಚ್ಚು ಕೇರಳಿಯರು ಕೊಲ್ಲಿ ರಾಷ್ಟ್ರಗಳಿಂದ ಭಾರತಕ್ಕೆ ಆಗಮಿಸಿದ್ದಾರೆ. ಅವರೆಲ್ಲರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ಕ್ವಾರಂಟೈನ್ ಮಾಡಲಾಗುತ್ತಿದೆ. ವಿದೇಶಗಳಿಂದ ಆಗಮಿಸುವ ಭಾರತೀಯರು, ಕೇಂದ್ರ ಆರೋಗ್ಯ ಇಲಾಖೆ ಸೂಚಿಸಿರುವ ಮಾರ್ಗದರ್ಶಿ ಸೂತ್ರಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕಾಗಿದೆ

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!