newsics.com
ಘಾನಾ: ಪಶ್ಚಿಮ ಘಾನಾದಲ್ಲಿ ಗಣಿಗಾರಿಕೆಯ ಸ್ಫೋಟಕಗಳನ್ನು ಸಾಗಿಸುತ್ತಿದ್ದ ವಾಹನ ಮೋಟಾರ್ ಸೈಕಲ್ಗೆ ಡಿಕ್ಕಿ ಹೊಡೆದು ಸ್ಫೋಟಗೊಂಡಿದೆ.
17 ಜನರು ಸಾವನ್ನಪ್ಪಿದ್ದಾರೆ ಮತ್ತು 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಪ್ರೆಸ್ಟಿಯಾ-ಹುನಿ ಕಣಿವೆ ಜಿಲ್ಲೆಯ ಗಣಿಗಾರಿಕೆ ಪಟ್ಟಣವಾದ ಬೊಗೊಸೊ ಬಳಿಯ ಅಪಿಯೇಟ್ನಲ್ಲಿ ಗುರುವಾರ ಅಪಘಾತ ನಡೆದಿದೆ.
57 ಜನರನ್ನು ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಕಳುಹಿಸಿದ್ದು, ಅಪಘಾತವನ್ನು ನೋಡಲು ಬಂದಿದ್ದ ಹಲವು ಮಂದಿ ಸ್ಫೋಟಕ್ಕೆ ಸಿಲುಕಿದ್ದಾರೆ ಮತ್ತು ಕೆಲವರು ಮೃತಪಟ್ಟಿದ್ದಾರೆ’ ಎಂದು ರಾಷ್ಟ್ರೀಯ ಆ್ಯಂಬುಲೆನ್ಸ್ ಸೇವೆಯ ಪ್ರಾದೇಶಿಕ ಮುಖ್ಯಸ್ಥ ಪ್ರಾಸ್ಪರ್ ಬಾಹ್ ಹೇಳಿದ್ದಾರೆ.