newsics.com
ರಾಂಚಿ: ಛತ್ತೀಸ್ ಗಢದ ಜಾಸ್ಪುರದಲ್ಲಿ ದುರ್ಗಾ ದೇವಿ ಮೆರವಣಿಗೆ ವೇಳೆ ಎಸ್ ಯು ವಿ ವಾಹನವೊಂದು ಗುಂಪಿನ ಮೇಲೆ ಹರಿದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. 20 ಮಂದಿ ಗಾಯಗೊಂಡಿದ್ದಾರೆ.
ಜನರು ದುರ್ಗಾ ದೇವಿ ಮೂರ್ತಿ ಹೊತ್ತುಕೊಂಡು ಮೆರವಣಿಗೆಯಲ್ಲಿ ಸಾಗುತ್ತಿದ್ದ ವೇಳೆ ವೇಗವಾಗಿ ಬಂದ ವಾಹನ ಅವರ ಮೇಲೆ ಹರಿದು ಹೋಗಿದೆ.
ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ