newsics.com
ನವದೆಹಲಿ: ಉಪ ರಾಷ್ಟ್ರಪತಿ ಆಯ್ಕೆಗೆ ಇಂದು ಮತದಾನ ನಡೆಯಲಿದೆ. ರಾಜ್ಯ ಸಭೆ ಮತ್ತು ಲೋಕಸಭೆಯ ಸದಸ್ಯರು ಈ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.
ಶಾಸಕರಿಗೆ ಮತದಾನದ ಹಕ್ಕು ಇಲ್ಲ. ಬಿಜೆಪಿ ನೇತೃತ್ವದ ಎನ್ ಡಿ ಎ ಅಭ್ಯರ್ಥಿಯಾಗಿ ಜಗದೀಪ್ ಧನ್ಕರ್ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ನೇತೃತ್ವದ ಮಿತ್ರ ಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ ಕಣದಲ್ಲಿ ಇದ್ದಾರೆ.
ಎನ್ ಡಿ ಎ ಸ್ಪಷ್ಟ ಬಹುಮತ ಹೊಂದಿರುವ ಕಾರಣ ಜಗದೀಪ್ ಧನ್ಕರ್ ಆಯ್ಕೆ ಬಹುತೇಕ ಖಚಿತ. ರಾತ್ರಿ ಎಂಟು ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಜಗದೀಪ್ ಧನ್ಕರ್ ಮೂಲತ: ರಾಜಸ್ತಾನದವರಾಗಿದ್ದಾರೆ. ಮಾರ್ಗರೇಟ್ ಆಳ್ವ ಅವರು ರಾಜಸ್ತಾನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.