Saturday, April 17, 2021

ಭಾರತ- ಆಸ್ಟೇಲಿಯಾ ಪ್ರಧಾನಿ ನಡುವೆ ವಿಡಿಯೋ ಮಾತು; 6 ಒಪ್ಪಂದಗಳಿಗೆ ಸಹಿ

ನವದೆಹಲಿ: ವ್ಯೂಹಾತ್ಮಕ ಸಹಕಾರಕ್ಕಾಗಿ ಪರಸ್ಪರ ಸೇನಾ ನೆಲೆಗಳಿಗೆ ಪ್ರವೇಶಾವಕಾಶಸಹಿತ 6 ಪ್ರಮುಖ ಒಪ್ಪಂದಗಳಿಗೆ ಭಾರತ ಹಾಗೂ ಆಸ್ಟೇಲಿಯಾ ಸಹಿ ಹಾಕಿವೆ.
ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಮಧ್ಯೆ ಗುರುವಾರ ವೀಡಿಯೊ ಕಾನ್ಫರೆನ್ಸ್ ಮೂಲಕ ನಡೆದ ಶೃಂಗಸಭೆಯ ಬಳಿಕ ಈ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ಭಾರತ ಈಗಾಗಲೇ ಇದೇ ಬಗೆಯ ಒಪ್ಪಂದವನ್ನು ಅಮೆರಿಕ, ಫ್ರಾನ್ಸ್ ಮತ್ತು ಸಿಂಗಾಪುರದೊಂದಿಗೂ ಮಾಡಿಕೊಂಡಿದೆ.
ವರ್ಚುವಲ್ ಶೃಂಗಸಭೆ ಭಾರತ-ಆಸ್ಟ್ರೇಲಿಯಾ ನಡುವಿನ ಸ್ನೇಹ ಸಂಬಂಧದ ಹೊಸ ಮಾದರಿಯಾಗಿದೆ. ಸ್ನೇಹಸಂಬಂಧವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಅಭೂತಪೂರ್ವ ಚರ್ಚೆ ನಡೆಸಲಾಗಿದೆ ಎಂದು ಇದೇ ವೇಳೆ ಪ್ರಧಾನಿ ಮೋದಿ ಅಭಿಪ್ರಾಯಪಟ್ಟರು.
ಆಸ್ಟ್ರೇಲಿಯಾ ಪ್ರಧಾನಿ ಮಾರಿಸನ್, ಜಿ-20 ನಾಯಕತ್ವ ಸಹಿತ ಕೊರೋನ ವೈರಸ್ ಸೋಂಕಿನ ವಿರುದ್ಧದ ಹೋರಾಟದಲ್ಲಿ ಮೋದಿ ತೋರಿರುವ ರಚನಾತ್ಮಕ ಮತ್ತು ಸಕಾರಾತ್ಮಕ ಕ್ರಮಗಳನ್ನು ಶ್ಲಾಘಿಸಿದರು.
ಭಯೋತ್ಪಾದಕತೆಯ ಬೆದರಿಕೆಯನ್ನು ಹತ್ತಿಕ್ಕುವುದು, ಇಂಡೊ-ಪೆಸಿಫಿಕ್ ವಲಯದಲ್ಲಿ ಸಮುದ್ರ ಸಂಬಂಧದ ಭದ್ರತೆಗೆ ಎದುರಾಗಿರುವ ಸವಾಲು, ವಿಶ್ವ ವ್ಯಾಪಾರ ಸಂಘಟನೆ(ಡಬ್ಲ್ಯುಟಿಒ)ದಲ್ಲಿ ಸುಧಾರಣೆ ಮತ್ತಿತರ ವಿಷಯಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದರು.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!