Saturday, April 17, 2021

ಚೀನಾದಿಂದ ಭಾರತಕ್ಕೆ ವೋನ್ ವೆಲ್ಸ್ ಪಾದರಕ್ಷೆ ಸಂಸ್ಥೆ ಶಿಫ್ಟ್

ಬೀಜಿಂಗ್: ಕೊರೋನಾದ ಹಿನ್ನೆಲೆಯಲ್ಲಿ  ಬಹು ರಾಷ್ಟ್ರೀಯ ಸಂಸ್ಥೆಗಳು ಚೀನಾಕ್ಕೆ ಗುಡ್ ಬೈ ಹೇಳುತ್ತಿದ್ದು, ಇದೀಗ ಪಾದರಕ್ಷೆ ತಯಾರಿಯಲ್ಲಿ ಹೆಸರುವಾಸಿಯಾಗಿರುವ ವೋನ್ ವೆಲ್ಸ್ ಸಂಸ್ಥೆ ಭಾರತಕ್ಕೆ ಆಗಮಿಸುತ್ತಿದೆ. ಭಾರತದ ಆಗ್ರಾದಲ್ಲಿ ಚಪ್ಪಲಿ ತಯಾರಿ ಕೇಂದ್ರ ಆರಂಭಿಸಲು ನಿರ್ಧರಿಸಿದೆ. ಜರ್ಮನಿ ಮೂಲದ ಈ ಪಾದರಕ್ಷೆ ಸಂಸ್ಥೆ ವಿಶ್ವದ 80 ರಾಷ್ಟ್ರಗಳಲ್ಲಿ  ವಾಣಿಜ್ಯ ಚಟುವಟಿಕೆ ನಡೆಸುತ್ತಿದೆ. ಸುಮಾರು 10 ಕೋಟಿ  ಗ್ರಾಹಕರನ್ನು ಇದು ಹೊಂದಿದೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಸಂಸ್ಥೆಗಳು ಸೇರಿದಂತೆ ಹಲವು ಅಗ್ರಗಣ್ಯ ಸಂಸ್ಥೆಗಳು ಚೀನಾದಿಂದ ನಿರ್ಗಮಿಸಲು ಚಿಂತನೆ ನಡೆಸಿವೆ. ಚೀನಾದಿಂದ ವಲಸೆ ಹೋಗುವ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳು ಭಾರತದಲ್ಲಿ ಬಂಡವಾಳ ಹೂಡಲು ಬಯಸಿದರೆ ಎಲ್ಲ ಸಹಕಾರ ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!