newsics.com
ನವದೆಹಲಿ: ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಿರಿಯ ಅಧಿಕಾರಿಗಳ ವಿರುದ್ಧ ತನಿಖೆಗೆ ಅವಕಾಶ ನೀಡುವಂತೆ ಸಿಬಿಐ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
ಐಷಾರಾಮಿ ಹೆಲಿಕಾಪ್ಟರ್ ಖರೀದಿ ಹಗರಣ ಕ್ಕೆ ಸಂಬಂಧಿಸಿದಂತೆ ಮಾಜಿ ರಕ್ಷಣಾ ಕಾರ್ಯದರ್ಶಿ ಮತ್ತು ಮಾಜಿ ಲೆಕ್ಕ ಪರಿಶೋಧಕ ನಿಯಂತ್ರಕ ಅಧಿಕಾರಿ ಶಶಿಕಾಂತ್ ಶರ್ಮಾ ಹಾಗೂ ಇತರ ನಾಲ್ವರು ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಸಿಬಿಐ ಅನುಮತಿ ಕೋರಿದೆ.
ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣ ಅಂದಾಜು ೩೬೦೦ ಕೋಟಿ ರೂಪಾಯಿಗಳದ್ದಾಗಿದ್ದು, ಈ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಅನುಮತಿ ನೀಡಲು ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸಿದ್ದು ಅನುಮತಿ ಬಳಿಕ ತನಿಖೆ ಮುಂದುವರೆಯಲಿದೆ.
ಮಾಜಿ ಏರವೈಸ್ ಮಾರ್ಷಲ್ ಜಸ್ಬೀರ್ ಸಿಂಗ್ ಪಣೇಸರ್ ವಿಚಾರಣೆಗೂ ಕೂಡ ಅನುಮತಿ ಕೋರಲಾಗಿದೆ.
ಯುಪಿಎ-೨ ರ ಅವಧಿಯಲ್ಲಿ ನಡೆದ ಈ ಹಗರಣದ ಕಾರಣಕ್ಕೆ ಕಾಂಗ್ರೆಸ್ ಸಾಕಷ್ಟು ಮುಜುಗರ ಅನುಭವಿಸಿತ್ತು.
ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣ; 4 ಅಧಿಕಾರಿಗಳ ವಿರುದ್ಧ ತನಿಖೆಗೆ ಅವಕಾಶ ಕೋರಿದ ಸಿಬಿಐ
Follow Us