Monday, October 3, 2022

ನಾಳೆ ಮಲ್ಟಿಪ್ಲೆಕ್ಸ್‌, ಥಿಯೇಟರ್‌ಗಳಲ್ಲಿ 75 ರೂ.ಗೆ ಸಿನಿಮಾ ವೀಕ್ಷಿಸಿ

Follow Us

newsics.com

ಬೆಂಗಳೂರು: ರಾಷ್ಟ್ರೀಯ ಸಿನಿಮಾ ದಿನಾಚರಣೆ 2022ರ ಅಂಗವಾಗಿ ತೆಲಂಗಾಣ, ಆಂಧ್ರಪ್ರದೇಶ ಹಾಗೂ ತಮಿಳುನಾಡು ಹೊರತುಪಡಿಸಿ ದೇಶದಾದ್ಯಂತ ನಾಳೆ(ಸೆ.23) ಕೇವಲ 75 ರೂ.ಗೆ ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ವೀಕ್ಷಿಸಬಹುದು.

ಮಲ್ಟಿಪ್ಲೆಕ್ಸ್‌ ಅಸೋಸಿಯೇಷನ್ ಆಫ್ ಇಂಡಿಯಾ (ಎಂಎಐ) ಟ್ವೀಟ್ ಮೂಲಕ ಈ ಮಾಹಿತಿ‌ ನೀಡಿದೆ. ಮೂರು ರಾಜ್ಯಗಳನ್ಜು ಹೊರತುಪಡಿಸಿ ದೇಶದ ಯಾವುದೇ ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ನಾಳೆ ಒಂದು ದಿನಕ್ಕೆ ಸೀಮಿತವಾಗಿ 75 ರೂ. ನೀಡಿ ಯಾವುದೇ ಸಿನಿಮಾ ನೋಡಬಹುದು.

ಚಿತ್ರಮಂದಿರಗಳಿಗೆ ಕೊರೋನಾ ಬಳಿಕ ಹೆಚ್ಚು ಜನರು ಬರುತ್ತಿಲ್ಲವಾದ್ದರಿಂದ ಹಾಗೂ ಚಿತ್ರಮಂದಿರಗಳ ಗತವೈಭವ ಮರಳಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಎಂಎಐ ತಿಳಿಸಿದೆ. ತೆಲಂಗಾಣ, ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯದಲ್ಲಿ ಟಿಕೆಟ್ ಮೇಲಿನ ಅಲ್ಲಿನ ಸರ್ಕಾರಗಳ ನಿಯಂತ್ರಣದಿಂದ ಎಂಎಐನ ಈ ನಿರ್ಧಾರ ಆ ರಾಜ್ಯಗಳಿಗೆ ಅನ್ವಯಿಸುವುದಿಲ್ಲ.

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!