Thursday, December 9, 2021

ಮುಂಬೈನಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ

Follow Us

ಮುಂಬೈ: ಕೊರೋನಾ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂಬೈನಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಸ್ಥಳೀಯ ಆಡಳಿತ ಆದೇಶ ನೀಡಿದೆ.
ಸಾರ್ವಜನಿಕ ಸ್ಥಳಗಳು, ಕಚೇರಿಗಳು, ಸಭೆಗಳು ತಕ್ಷಣವೇ ಪರಿಣಾಮಕಾರಿಯಾಗಿ ಮಾಸ್ಕ್ ಧರಿಸುವುದನ್ನು ಪಾಲಿಸಬೇಕೆಂದು ತಿಳಿಸಿದೆ. ಒಂದು ವೇಳೆ ಉಲ್ಲಂಘಿಸುವವರು ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಮತ್ತು ಅವರನ್ನು ಬಂಧಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
‘ಮೆಡಿಕಲ್ ನಲ್ಲಿ ಸಿಗುವ ಮಾಸ್ಕ್ ಆಗಿರಬಹುದು ಅಥವಾ ಮನೆಯಲ್ಲಿ ತೊಳೆಯಬಹುದಾದ ಮಾಸ್ಕ್ ಆಗಿರಬಹುದು. ಅವುಗಳನ್ನು ಸರಿಯಾಗಿ ತೊಳೆಯುವ ಮತ್ತು ಸೋಂಕು ನಿವಾರಕಗೊಳಿಸಿದ ನಂತರ ಮರುಬಳಕೆ ಮಾಡಬಹುದು’ ಎಂದು ಗ್ರೇಟರ್ ಮುಂಬೈ ಮುನ್ಸಿಪಲ್ ಕಮಿಷನರ್ ಪ್ರವೀಣ್ ಪರದೇಶಿ ತಿಳಿಸಿದ್ದಾರೆ.
ಚಂಡಿಗಢ, ನಾಗಾಲ್ಯಾಂಡ್ ಮತ್ತು ಒಡಿಶಾದ ಅಧಿಕಾರಿಗಳು ಈಗಾಗಲೇ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!