Monday, April 12, 2021

ದೇಲಂಪಾಡಿ ಬಾಲಕೃಷ್ಣ ತಂತ್ರಿ ಇನ್ನಿಲ್ಲ

ಕಾಸರಗೋಡು: ಕಾಸರಗೋಡಿನ ಕುಂಬಳೆ ಸೀಮೆಯ ಖ್ಯಾತ ತಂತ್ರಿ ವರ್ಯರಾದ ದೇಲಂಪಾಡಿ ಬಾಲಕೃಷ್ಣ ತಂತ್ರಿ ಅವರು ಇನ್ನಿಲ್ಲ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ಕೊನೆಯುಸಿರೆಳೆದರು.  ಕುಂಬಳೆ ಸೀಮೆಯ ಹಲವು ದೇವಸ್ಥಾನಗಳಲ್ಲಿ ನಡೆದ  ಬ್ರಹ್ಮ ಕಲಶೋತ್ಸವಕ್ಕೆ ಇವರು ನೇತೃತ್ವ ವಹಿಸಿದ್ದರು. ಭಾರತದ ಪ್ರಾಚೀನ  ಶಾಸ್ತ್ರಗಳಲ್ಲಿ  ಅವರು ಪರಿಣಿತರಾಗಿದ್ದರು.

ಕಾಸರಗೋಡು ಸಮೀಪದ ಅಗಲ್ಪಾಡಿಯಲ್ಲಿ ನೆಲೆಸಿದ್ದ ದೇಲಂಪಾಡಿ ಬಾಲಕೃಷ್ಣ ತಂತ್ರಿಯವರು ಅತ್ಯಂತ ಸರಳ ಜೀವಿಯಾಗಿದ್ದರು. ಪಾಂಡಿತ್ಯದ ಸಾಗರವಾಗಿದ್ದರೂ  ನಡೆ ನುಡಿಯಲ್ಲಿ ವಿನಯದ ಮೂರ್ತ ಸ್ವರೂಪವಾಗಿದ್ದರು. ದೇವಸ್ಥಾನಗಳಲ್ಲಿ ವಿಧಿ ವತ್ತಾಗಿ ನಡೆಸಬೇಕಾದ ಬ್ರಹ್ಮ ಕಲಶೋತ್ಸವದ ಬಗ್ಗೆ ಅತ್ಯಂತ ನಿಖರ ಹಾಗೂ ಸ್ಪಷ್ಟ ಮಾಹಿತಿ ಹೊಂದಿದ್ದರು.

ವೇದಗಳ ಸಮಗ್ರ ಅಧ್ಯಯನ ನಡೆಸಿದ್ದ ಬಾಲಕೃಷ್ಣ  ತಂತ್ರಿಯವರು ಎಲ್ಲರ ಜತೆ ನಿಕಟ ಸಂಬಂಧ ಇರಿಸಿಕೊಂಡಿದ್ದರು. ಕರ್ನಾಟಕದಲ್ಲಿ ಕೂಡ ಬಾಲಕೃಷ್ಣ ತಂತ್ರಿಯವರು ಅಪಾರ ಅಭಿಮಾನಿಗಳನ್ನು ಹೊಂದಿದ್ದರು.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!