ಗುವಾಹತಿ: ಸ್ವಂತ ಖರ್ಚಿನಲ್ಲೇ ತಮ್ಮ ಮನೆಯ ಹಿತ್ತಲಿನಲ್ಲಿ ಪತಿಯ ಪ್ರತಿಮೆ ನಿರ್ಮಿಸುವ ಮೂಲಕ ಅಸ್ಸಾಂನ ಪುಲ್ವಾಮಾ ಹುತಾತ್ಮ ಯೋಧರೊಬ್ಬರ ಪತ್ನಿ ಇಡೀ ದೇಶವೇ ಹೆಮ್ಮೆಪಡುವಂತೆ ಮಾಡಿದ್ದಾರೆ.
ಯೋಧ ಮನೇಶ್ವರ್ ಬಸುಮಾಟರಿ ಹುತಾತ್ಮರಾದ ಬಳಿಕ ಆತನ ಕುಟುಂಬ ಮನೆಯ ಹಿತ್ತಲಿನಲ್ಲಿ ಪ್ರತಿಮೆ ನಿರ್ಮಿಸಲು ನಿರ್ಧರಿಸಿತು. 10 ಲಕ್ಷ ರೂಪಾಯಿ ವೆಚ್ಚದಲ್ಲಿ ಪ್ರತಿಮೆ ನಿರ್ಮಿಸಿದ್ದು, ರಾಜ್ಯಸಭಾ ಸದಸ್ಯ ಬಿಸ್ವಜೀತ್ ದೈಮರಿ ಅವರು ಶುಕ್ರವಾರ ಪ್ರತಿಮೆ ಅನಾವರಣಗೊಳಿಸಿದ್ದಾರೆ.
ಫೆಬ್ರವರಿ 14, 2019 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಪಾಕಿಸ್ತಾನ ಬೆಂಬಲಿತ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಅಸ್ಸಾಂನ ಬಕ್ಸಾ ಜಿಲ್ಲೆಯ ಮನೇಶ್ವರ್ 40ಕ್ಕೂ ಹೆಚ್ಚು ಕೇಂದ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿ ಸಾವನ್ನಪ್ಪಿದ್ದರು.
ಪತಿಯ ಪ್ರತಿಮೆ ನಿರ್ಮಿಸಿದ ಹುತಾತ್ಮ ಯೋಧನ ಪತ್ನಿ!
Follow Us