Monday, August 8, 2022

ಸೂಪರ್ ಓವರ್’ನಲ್ಲಿ RCBಗೆ ಜಯ

Follow Us

newsics.com
ದುಬೈ: ಐಪಿಎಲ್ 13ನೇ ಆವೃತ್ತಿಯ 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂಬೈ ಇಂಡಿಯನ್ಸ್ ತಂಡವನ್ನು ಸೂಪರ್ ಓವರ್ ನಲ್ಲಿ ಮಣಿಸಿದೆ.
ಆರ್‌ಸಿಬಿ ನೀಡಿದ್ದ 202 ರನ್​ಗಳ ಗುರಿ ಬೆನ್ನತ್ತಿದ ಮುಂಬೈ 201 ರನ್ ಗಳಿಸಿ ಪಂದ್ಯವನ್ನು ಟೈ ಮಾಡಿಕೊಂಡಿತ್ತು. ನಂತರ ಸೂಪರ್ ಓವರ್ ನಲ್ಲಿ ಬೆಂಗಳೂರಿಗೆ 8 ರನ್ ಗುರಿ ನೀಡಿತ್ತು. ಆರ್‌ಸಿಬಿ ಪರ ನಾಯಕ ವಿರಾಟ್ ಕೊಹ್ಲಿ(5*) ಹಾಗೂ ಎಬಿ ಡಿ ವಿಲಿಯರ್ಸ್(6*) ರನ್ ಗಳಿಸಿ ತಂಡಕ್ಕೆ ಜಯ ದೊರಕಿಸಿದ್ದಾರೆ.
ಮುಂಬೈನ ಇಶನ್ ಕಿಶನ್(99) ಹಾಗೂ ಕಿರನ್ ಪೋಲಾರ್ಡ್(60) ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡವು 5 ವಿಕೆಟ್ ಗೆ 201 ರನ್ ಕಲೆಹಾಕಿದ್ದರು. ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಬೆಂಗಳೂರು ದೇವದತ್ ಪಡಿಕ್ಕಲ್, ಅರಮ್ ಪಿಂಚ್, ಎಬಿ ಡಿ ವಿಲಿಯರ್ಸ್ ಮತ್ತು ಶಿವಬ್ ದುಬೆ ಅವರ ನೆರವೆನಿಂದ20 ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!