Monday, April 12, 2021

ಆನ್ಲೈನ್ ಮೂಲಕ ‌ಮದ್ಯ ವಿತರಿಸಿ; ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ

ನವದೆಹಲಿ; ಕೊರೋನಾ ಹರಡದಂತೆ ನೋಡಿಕೊಳ್ಳಲು ಹಾಗೂ ಸಾಮಾಜಿಕ ಅಂತರದ ಹಿತದೃಷ್ಟಿಯಿಂದ ಎಲ್ಲ ರಾಜ್ಯಗಳು ಮಳಿಗೆಗಳಲ್ಲಿ ಮದ್ಯ ಮಾರಾಟ ಮಾಡುವ ಬದಲು ಹೋಂ ಡೆಲಿವರಿ ಮಾಡುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.
“ಮದ್ಯದ ಅಂಗಡಿಗಳಲ್ಲಿ ಜನದಟ್ಟಣೆ ಹೆಚ್ಚಿದೆ, ಇದರಿಂದ ಕೊರೊನಾ ವ್ಯಾಪಕವಾಗಿ ಹರಡಲಿದೆ” ಎಂದು ಸುಪ್ರೀಂ ಕೋರ್ಟ್‌‌ನಲ್ಲಿ ಪಿಐಎಲ್‌ ದಾಖಲಿಸಲಾಗಿತ್ತು. ಶುಕ್ರವಾರ  ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, “ಮಳಿಗೆಗಳಲ್ಲಿ ಮದ್ಯ ಮಾರಾಟ ಮಾಡುವುದರಿಂದ ಜನ ಸಂದಣಿ ಹೆಚ್ಚಾಗುತ್ತದೆ. ಈ ಮೂಲಕವೂ ಕೊರೋನಾ ವೈರಸ್‌ ಹರಡುವ ಸಾಧ್ಯತೆ ಇದೆ. ಆನ್‌ಲೈನ್ ಮೂಲಕ ಮನೆಗಳಿಗೆ ಮದ್ಯವನ್ನು ವಿತರಿಸಬೇಕು” ಎಂದು ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಿದೆ.
ಲಾಕ್‌ಡೌನ್ ಹಿನ್ನೆಲೆಯಲ್ಲಿ ಬರೋಬ್ಬರಿ 45  ದಿನಗಳ ಕಾಲ ದೇಶದಾದ್ಯಂತ ಮದ್ಯ ಮಾರಾಟವನ್ನು ಸ್ಥಗಿತಗೊಳಿಸಲಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!