ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದಲ್ಲಿ ಸಿಲುಕಿದ್ದ ಸಿಬ್ಬಂದಿಯನ್ನು ವಿಪ್ರೋ ಭಾರತಕ್ಕೆ ಕರೆ ತಂದಿದೆ. ಸಂಸ್ಥೆಯ ಅಧ್ಯಕ್ಷ ರಿಷಾದ್ ಪ್ರೇಮ್ ಜಿ ಅವರು ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ಸಂಸ್ಥೆಯ ಸಿಬ್ಬಂದಿಯನ್ನು ಭಾರತಕ್ಕೆ ಕರೆ ತರುವಲ್ಲಿ ನೆರವಾದ ಕೇಂದ್ರ ಸರ್ಕಾರ ಮತ್ತು ಇತರ ಎಲ್ಲ ಇಲಾಖೆಗಳಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಸಿಲುಕಿದ್ದ ವಿಪ್ರೋ ಸಂಸ್ಥೆಯ ಸಿಬ್ಬಂದಿ ಬೆಂಗಳೂರಿಗೆ ಮರಳಿದ್ದಾರೆ. ಕಳೆದ ಹಲವು ತಿಂಗಳಿನಿಂದ ಈ ಸಂಸ್ಥೆಯ ಸಿಬ್ಬಂದಿ ಆಸ್ಟ್ರೇಲಿಯಾದಲ್ಲಿ ಸಿಲುಕಿದ್ದರು. ಈ ಹಿಂದೆ ಇನ್ಪೋಸಿಸ್ ಕೂಡ ಅಮೆರಿಕದಿಂದ ವಿಶೇಷ ವಿಮಾನದಲ್ಲಿ ತನ್ನ ಸಿಬ್ಬಂದಿಯನ್ನು ಭಾರತಕ್ಕೆ ಕರೆ ತಂದಿತ್ತು