Tuesday, April 13, 2021

ಜಮ್ಮು ಕಾಶ್ಮೀರದಲ್ಲಿ 14 ದಿನಗಳಲ್ಲಿ 22 ಭಯೋತ್ಪಾದಕರ ಹತ್ಯೆ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಸಕ್ರಿಯಗೊಳಿಸುವ ಪಾಕಿಸ್ತಾನದ ಸಂಚನ್ನು ವಿಫಲಗೊಳಿಸಲಾಗಿದೆ. ಕಳೆದ 14 ದಿನಗಳಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ಬರೋಬರಿ 22 ಭಯೋತ್ಪಾದಕರನ್ನು ಯಮಪುರಿಗೆ ಅಟ್ಟಲಾಗಿದೆ. ಇದರಲ್ಲಿ  ಉಗ್ರ ಸಂಘಟನೆಯ ಆರು ಹಿರಿಯ ಕಮಾಂಡರ್ ಗಳು ಕೂಡ ಸೇರಿದ್ದಾರೆ. ಜಮ್ಮು ಕಾಶ್ಮೀರ ಪೊಲೀಸ್ ಪಡೆ, ರಾಷ್ಟ್ರೀಯ ರೈಫಲ್ಸ್ , ಸಿಆರ್ ಪಿಎಫ್ ಮತ್ತು ಯೋಧರನ್ನು ಒಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ. ಜಮ್ಮು ಕಾಶ್ಮೀರ ಡಿಜಿಪಿ ದಿಲ್ ಭಾಗ್ ಸಿಂಗ್ ಈ ಮಾಹಿತಿ ನೀಡಿದ್ದಾರೆ. ಭಯೋತ್ಪಾದಕರ ವಿರುದ್ಧ 9 ಬೃಹತ್  ಕಾರ್ಯಾಚರಣೆ ನಡೆಸಲಾಗಿದ್ದು, ಅಭೂತಪೂರ್ವ ಯಶಸ್ಸು ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕಳೆದ 24 ಗಂಟೆ ಅವಧಿಯಲ್ಲಿ ಜಮ್ಮು ಕಾಶ್ಮೀರದಲ್ಲಿ 9 ಭಯೋತ್ಪಾದಕರು ಹತರಾಗಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!