newsics.com
ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನು ಮನೆಗೆ ನುಗ್ಗಿ ಅಪಹರಿಸಲಾಲಿಗೆದ. ನೂರು ಮಂದಿ ಯುವಕರ ತಂಡ ಮನೆಗೆ ನುಗ್ಗಿ ಮಗಳನ್ನು ಅಪಹರಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಅಪಹರಣಕ್ಕೆ ಒಳಗಾದ ಯುವತಿಯನ್ನು ವೈಶಾಲಿ ಎಂದು ಗುರುತಿಸಲಾಗಿದೆ. ಇಡೀ ಮನೆಯನ್ನು ದುಷ್ಕರ್ಮಿಗಳು ಹಾಳು ಮಾಡಿದ್ದಾರೆ. ಮನೆಯಲ್ಲಿ ಇದ್ದ ವಸ್ತುಗಳನ್ನು ಪುಡಿ ಪುಡಿ ಮಾಡಿದ್ದಾರೆ.
ರಂಗಾರೆಡ್ಡಿ ಜಿಲ್ಲೆಯ ಆದಿಬಟ್ಲ ಎಂಬಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.