ಹೈದರಾಬಾದ್: 36 ವರ್ಷದ ಮಹಿಳೆಯನ್ನು ಮನೆಯಿಂದ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತೆಲಂಗಾಣದ ಖಮ್ಮಂ ಬಳಿಯ ಗ್ರಾಮದಲ್ಲಿ ನಡೆದಿದೆ.
ರಾತ್ರಿ ಮಹಿಳೆ ಮನೆಗೆ ತೆರಳಿ ಬೆದರಿಕೆ ಹಾಕಿದ ಇಬ್ಬರು ವ್ಯಕ್ತಿಗಳು ಮಹಿಳೆಯನ್ನು ಸಮೀಪದ ಹತ್ತಿಯ ಹೊಲಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ. ಈ ವೇಳೆ ಮಹಿಳೆಯ ಪತಿ ಪಕ್ಕದ ಕೋಣೆಯಲ್ಲಿ ಮಲಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ತಿ ಹೊಲದಲ್ಲಿ ಐವರು ಪುರುಷರು ಕಾಯುತ್ತಿದ್ದರು. ಅವರಲ್ಲಿ ಮೂವರು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.
ಸಂತ್ರಸ್ತೆ ದೂರು ಆಧರಿಸಿ ಪೊಲೀಸರು 7 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹತ್ತಿ ಹೊಲದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
Follow Us