newsics.com
ನವದೆಹಲಿ: ಒಂದು ಮಾತಿನಲ್ಲಿ ಹೇಳುವುದಾದರೆ ಇದು ಪೊಲೀಸ್ ಇಲಾಖೆಯ ಸಬ್ ಇನ್ಸ್ ಪೆಕ್ಟರ್ ಅತ್ಯಾಚಾರದ ಕಥೆ. ಅತ್ಯಾಚಾರ ಆರೋಪಕ್ಕೆ ಗುರಿಯಾಗಿರುವ ಪುರುಷ ಸಬ್ ಇನ್ಸ್ ಪೆಕ್ಟರ್ ನ್ನು ರಕ್ಷಿಸಲು ತನಿಖಾಧಿಕಾರಿ ಮಹಿಳಾ ಸಬ್ ಇನ್ಸ್ ಪೆಕ್ಟರ್ ಲಂಚ ಸ್ವೀಕರಿಸಿದ್ದಾರೆ. ಇದು ನಡೆದಿರುವುದು ದೆಹಲಿಯ ಮಾಳವೀಯ ನಗರ ಪೊಲೀಸ್ ಠಾಣೆಯಲ್ಲಿ.
ಸಬ್ ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಯೊಬ್ಬರು ಮಹಿಳಾ ಕಾನ್ ಸ್ಟೇಬಲ್ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ತನಿಖೆಯ ಹೊಣೆಯನ್ನು ಮಹಿಳಾ ಸಬ್ ಇನ್ಸ್ ಪೆಕ್ಟರ್ ಗೆ ನೀಡಲಾಗಿತ್ತು. ಇದೀಗ ಆ ತನಿಖಾಧಿಕಾರಿ ಆರೋಪಿ ಸಬ್ ಇನ್ಸ್ ಪೆಕ್ಟರ್ ಬಳಿ ಲಂಚಕ್ಕೆ ಕೈಯೊಡ್ಡಿ ಸಿಕ್ಕಿಬಿದ್ದಿದ್ದಾರೆ
ಸಿಬಿಐ ಮಹಿಳಾ ಎಸ್ ಐ ಮತ್ತು ಎ ಎಸ್ ಐ ಯನ್ನು ಬಂಧಿಸಿದೆ. ಅತ್ಯಾಚಾರ ಪ್ರಕರಣ ಮುಚ್ಚಿ ಹಾಕಲು ಹೇಗೆ ವ್ಯವಸ್ಥಿತ ಸಂಚು ನಡೆಸಲಾಗುತ್ತಿದೆ ಎಂಬುದಕ್ಕೆ ಈ ಪ್ರಕರಣ ನಿದರ್ಶನವಾಗಿದೆ