ತಿರುವನಂತಪುರ: ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಯಾವ ನಿರ್ಧಾರ ತೆಗೆದುಕೊಳ್ಳಬೇಕು ಎಂಬ ಬಗ್ಗೆ ತಿರುವಾಂಕೂರ್ ದೇವಸ್ಥಾನ ಮಂಡಳಿ ಇಂದು ತೀರ್ಮಾನ ತೆಗೆದುಕೊಳ್ಳಲಿದೆ. ಸಭೆಯಲ್ಲಿನ ತೀರ್ಮಾನವನ್ನು ಸುಪ್ರೀಂ ಕೋರ್ಟಿನ 9 ಮಂದಿ ಸದಸ್ಯರ ನ್ಯಾಯಪೀಠದ ಮುಂದೆ ಮಂಡಿಸಲಿದೆ. ಈ ಸಂಬಂಧ ವಿಚಾರಣೆಗೆ ಸುಪ್ರೀಂ ಕೋರ್ಟ್ ಈಗಾಗಲೇ ದಿನಾಂಕ ನಿಗದಿಪಡಿಸಿದ್ದು, 9 ಮಂದಿ ನ್ಯಾಯಮೂರ್ತಿಗಳ ಪೀಠ ಕೂಡ ರಚಿಸಿದೆ.