Saturday, February 27, 2021

ಪತಿಯನ್ನು ಕಟ್ಟಿ ಹಾಕಿ ಮಹಿಳೆ ಮೇಲೆ ನಾಲ್ವರಿಂದ ಅತ್ಯಾಚಾರ

NEWSICS.COM

ಯಮುನಾನಗರ: ಹರಿಯಾಣದ ಯಮುನಾನಗರದಲ್ಲಿ ನೇಪಾಳಿ ಮಹಿಳೆಯ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರವೆಸಗಿದ ಕೃತ್ಯ ನಡೆದಿದೆ. ದುಷ್ಕರ್ಮಿಗಳು ಆಕೆಯ ಪತಿಯನ್ನು ಕಂಬಕ್ಕೆ ಕಟ್ಟಿಹಾಕಿ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಕೃಷಿ ಕಾರ್ಮಿಕನಾಗಿ ಕೆಲಸ ಮಾಡುವ ಪತಿಯೊಂದಿಗೆ ಯಮುನಾನಗರದ ಬಳಿ ಟ್ಯೂಬ್‌ವೆಲ್ ಕೋಣೆಯಲ್ಲಿ ವಾಸಿಸುತ್ತಿದ್ದ 37ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಮಾಡಲಾಗಿದೆ.
ಈ ಕುರಿತು ಮಹಿಳೆ ದೂರು ನೀಡಿದ್ದು, ಗುರುವಾರ ರಾತ್ರಿ 11ಗಂಟೆ ವೇಳೆ ಮನೆಗೆ ಬಂದ ಐವರು ಪತಿಯನ್ನು ಕಟ್ಟಿಹಾಕಿ ನಾಲ್ವರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇಂಗ್ಲೆಂಡ್’ನ ಮಾಜಿ ಕ್ರಿಕೆಟಿಗ ರಾಬಿನ್ ಜಾಕ್ಮನ್ ನಿಧನ

ಮತ್ತಷ್ಟು ಸುದ್ದಿಗಳು

Latest News

ಸಹೋದರಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಚೂರಿಯಿಂದ ಇರಿತ

Newsics.com ನವದೆಹಲಿ: ಸಹೋದರಿಗೆ ಕಿರುಕುಳ ನೀಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ 17 ವರ್ಷ ಪ್ರಾಯದ ಹುಡುಗನಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ. ಗಂಭೀರ ಹಲ್ಲೆ ನಡೆಸಿದ್ದಾರೆ. ದೆಹಲಿಯ ಕಲ್ಕಾಜಿ ಪ್ರದೇಶದಲ್ಲಿ ಈ ಘಟನೆ...

20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕ ಅಮಾನತು

newsics.com ಕೊಚ್ಚಿ: ಕೇರಳದ ದೇವಸ್ಥಾನವೊಂದರಲ್ಲಿ 20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕರೊಬ್ಬರನ್ನು ಅಮಾನತು ಮಾಡಲಾಗಿದೆ. ದೇವಸ್ಥಾನ ಆಡಳಿತ ಮಂಡಳಿಯ ನೀತಿಗೆ  ವಿರುದ್ದವಾಗಿ ಅರ್ಚಕರು ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಕೊಚ್ಚಿ ಸಮೀಪದ ಮಾಚಾಡ್ ತಿರುವಣ್ಣಿಕಾವ್ ದೇವಸ್ಥಾನದಲ್ಲಿ...

ಜಲ್ಲಿಕಟ್ಟು ವೇಳೆ ಅನಾಹುತ: ನಾಲ್ಕು ಮಂದಿ ಸಾವು

newsics.com ಚೆನ್ನೈ: ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ ವೇಳೆ ಮತ್ತೊಮ್ಮೆ ದುರಂತ ಸಂಭವಿಸಿದೆ.ಶಿವಗಂಗಾ ಜಿಲ್ಲೆಯ ಅರಲಿಪಾರಯಿ ಗ್ರಾಮದಲ್ಲಿ ಹೋರಿ ಬೆದರಿಸುವ ವೇಳೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. 90ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಸ್ಥಳೀಯ ದೇವಸ್ಥಾನದ ಉತ್ಸವದ ಅಂಗವಾಗಿ...
- Advertisement -
error: Content is protected !!