newsics.com
ನವದೆಹಲಿ: ದೇಶದಲ್ಲಿ ಮಹಿಳೆಯರ ಸುರಕ್ಷತೆಯನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ದೂರವಾಣಿ ಸಂಖ್ಯೆ ಜಾರಿಗೆ ತಂದಿದೆ. ಅಗ್ನಿಶಾಮಕ ದಳದ ಮಾದರಿಯಲ್ಲಿ ಮಹಿಳೆಯರು ಅಪಾಯಕ್ಕೆ ಸಿಲುಕಿದರೆ 112 ಸಂಖ್ಯೆಗೆ ಕರೆ ಮಾಡಿದರೆ ತಕ್ಷಣ ನೆರವು ದೊರೆಯಲಿದೆ.
ಸಚಿವೆ ಸ್ಮತಿ ಇರಾನಿ ಈ ಮಾಹಿತಿ ನೀಡಿದ್ದಾರೆ. ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ಇದು ಪರಿಣಾಮಕಾರಿಯಾಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ
112 ಸಂಖ್ಯೆ ಇಡೀ ದೇಶದಲ್ಲಿ ಕಾರ್ಯ ನಿರ್ವಹಿಸಲಿದೆ. ಅಪಾಯಕ್ಕೆ ಸಿಲುಕಿದಾಗ ಯಾರಿಗೆ ಕರೆ ಮಾಡಬೇಕು ಎಂಬ ಗೊಂದಲ ಅವರನ್ನು ಕಾಡುತ್ತಿದೆ. ಇದಕ್ಕೆ ಪರಿಹಾರ ಕಲ್ಪಿಸಲು ಈ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಸಚಿವೆ ಸ್ಮತಿ ಇರಾನಿ ಹೇಳಿದ್ದಾರೆ.