Tuesday, April 13, 2021

ಮಾಸ್ಕ್ ಧರಿಸದಿದ್ದರೆ ಕೋವಿಡ್ ಆಸ್ಪತ್ರೆಗಳಲ್ಲಿ ಕೆಲಸ!

ಗ್ವಾಲಿಯರ್: ಮಾಸ್ಕ್ ಧರಿಸದೆ ನೀವು ತಪಾಸಣಾಧಿಕಾರಿಗಳ ಬಳಿ ಸಿಕ್ಕಿಹಾಕಿಕೊಂಡರೆ, ನೇರವಾಗಿ ಕೋವಿಡ್ 19 ಆಸ್ಪತ್ರೆಗೆ ಹೋಗಬೇಕು. ಅಲ್ಲಿ ಕೊರೋನಾ ಸೋಂಕಿತ ವ್ಯಕ್ತಿಗಳ ಸೇವೆಗೆ ಸಿದ್ಧವಾಗಬೇಕು.
ಇಂತಹದೊಂದು ಕಠಿಣ ಶಿಕ್ಷೆಯನ್ನು ಮಧ್ಯಪ್ರದೇಶದ ಗ್ವಾಲಿಯರ್ ನ ನಗರಾಡಳಿತ ಜಾರಿಗೊಳಿಸಿದೆ. ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ ಅಥವಾ ಕೊವಿಡ್-19 ಮಾರ್ಗದರ್ಶಿ ಸೂತ್ರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸದಿದ್ದರೆ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಶಿಕ್ಷೆ ನೀಡಲಾಗುತ್ತಿದೆ.
ಸರ್ಕಾರ ಎಷ್ಟೇ ಮುಂಜಾಗ್ರತಾ ಕ್ರಮಗಳನ್ನು ವಹಿಸಿದರೂ ಸಾರ್ವಜನಿಕರ ಬೆಂಬಲವಿಲ್ಲದೆ ಭಾರತ ಕೊರೋನಾ ವಿರುದ್ಧದ ಹೋರಾಟದಲ್ಲಿ ಹಿಂದೆ ಬೀಳುತ್ತಿದೆ. ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು ಸೇರಿದಂತೆ ಸಾಕಷ್ಟು ವಿಚಾರಗಳನ್ನು ಜನ ಮರೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶದಲ್ಲಿ ಇಂತಹ ವಿನೂತನ ಪ್ರಯೋಗಕ್ಕೆ ಸರ್ಕಾರ ಮುಂದಾಗಿದೆ.
ಮಾಸ್ಕ್ ಧರಿಸದೆ ಸಿಕ್ಕಿಹಾಕಿಕೊಂಡವರನ್ನು ಕೇವಲ ಆಸ್ಪತ್ರೆಯಲ್ಲದೇ ಪೊಲೀಸ್ ಚೆಕ್ ಪೋಸ್ಟ್ ಗಳಲ್ಲಿಯೂ ಸ್ವಯಂಸೇವಕರಾಗಿ ಕೆಲಸ ಮಾಡಲು ನಿಯೋಜಿಸಲಾಗುತ್ತಿದ್ದು, ಇದರ ಜತೆಗೆ ದಂಡ ಕೂಡ ಹಾಕಲಾಗುತ್ತಿದೆ.
ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ ಕನಿಷ್ಟ 3 ದಿನ ಆಸ್ಪತ್ರೆಗಳಲ್ಲಿ, ಫೀವರ್ ಕ್ಲಿನಿಕ್ ಗಳಲ್ಲಿ ಮತ್ತು ಪೊಲೀಸ್ ಚೆಕ್ ಪೋಸ್ಟ್ ಗಳಲ್ಲಿ ಕೆಲಸ ಮಾಡುವ ಶಿಕ್ಷೆ ನೀಡಲಾಗುತ್ತಿದೆ ಎಂದು ಗ್ವಾಲಿಯರ್ ಜಿಲ್ಲಾಧಿಕಾರಿ ಕೌಶಲೇಂದ್ರ ವಿಕ್ರಮ್ ಸಿಂಗ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!