Saturday, November 26, 2022

ಡಬ್ಲ್ಯುಟಿಸಿ ಪೈನಲ್: ನ್ಯೂಜಿಲೆಂಡ್ ಮುನ್ನಡೆ; ಶಮಿ, ಶರ್ಮಾ ಉತ್ತಮ‌ ಪ್ರದರ್ಶನ

Follow Us

newsics.com

ಸೌತಾಂಪ್ಟನ್ಳ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಭಾರತ, ನ್ಯೂಜಿಲೆಂಡ್ ತಂಡವನ್ನು 249 ರನ್ ಗಳಿಗೆ ಕಟ್ಟಿ ಹಾಕಿದೆ. ಕಿವೀಸ್ 32 ರನ್ ಗಳ ಮುನ್ನಡೆ ಸಾಧಿಸಿದೆ.

ಮೊಹಮ್ಮದ್ ಶಮಿ (76ಕ್ಕೆ 4) ಹಾಗೂ ಇಶಾಂತ್ ಶರ್ಮಾ (48ಕ್ಕೆ 3) ಅವರ ಬಿಗುವಿನ ದಾಳಿ ನ್ಯೂಜಿಲೆಂಡ್ ಆಟಕ್ಕೆ ಹಿನ್ನಡೆಯಾಯಿತು. ಐದನೇ ದಿನವಾರ ಮಂಗಳವಾರ 2 ವಿಕೆಟ್ ಗೆ 101 ರನ್ ಗಳಿಂದ ಆಟ ಮುಂದುವರಿಸಿದ ನ್ಯೂಜಿಲೆಂಡ್ ಪಡೆ 249 ರನ್ ಗಳಿಗೆ ಆಲೌಟ್ ಆಯಿತು.

ಭಾರತದ ಮೊಹಮ್ಮದ್ ಶಮಿ ಗರಿಷ್ಠ ನಾಲ್ಕು ವಿಕೆಟ್ ಪಡೆವ ಮೂಲಕ ಕಿವೀಸ್ ಮುನ್ನಡೆಯನ್ನು ತಡೆದರು. ಇಶಾಂತ್ ಶರ್ಮಾ ಮೂರು, ಆರ್ ಅಶ್ವಿನ್ ಎರಡು ಮತ್ತು ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದರು.

ಐದನೇ ದಿನ ಮಳೆಯಿಂದಾಗಿ ಅರ್ಧ ಗಂಟೆ ತಡವಾಗಿ ಆರಂಭವಾಗಿದ್ದ ಪಂದ್ಯದ ಮೊದಲ ಸೆಷನ್ ನಲ್ಲಿ ಕಿವೀಸ್ 23 ಓವರ್‌ಗಳಲ್ಲಿ 34 ರನ್ ಗಳಿಸಿದರೆ ಮೂರು ವಿಕೆಟ್ ಕಳೆದುಕೊಂಡಿತ್ತು. ನಂತರ ಎಚ್ಚರಿಕೆಯಿಂದ ಆಡಿತಾದರೂ ಪ್ರಯೋಜನವಾಗಲಿಲ್ಲ.

ಮೊದಲ ಇನ್ನಿಂಗ್ಸ್ ನಲ್ಲಿ ನ್ಯೂಜಿಲ್ಯಾಂಡ್ 3 ವಿಕೆಟ್ ನಷ್ಟಕ್ಕೆ 117 ರನ್ ಗಳಿಸಿದ್ದರೆ ಮೊದಲು ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ 217 ರನ್ ಗಳಿಗೆ ಆಲೌಟ್ ಆಗಿತ್ತು.

ಮಗಳೊಂದಿಗೆ ಹೊಸ ಸ್ಟೈಲ್’ನಲ್ಲಿ ಕಾಣಿಸಿಕೊಂಡ ಧೋನಿ

ರಾಜ್ಯದಲ್ಲಿ ಮೊದಲ ಡೆಲ್ಟಾ ಪ್ಲಸ್ ವೈರಸ್ ಪತ್ತೆ

ಒಲಿಂಪಿಕ್ಸ್ ನಲ್ಲಿ ಮೊದಲ ಬಾರಿ ತೃತೀಯ ಲಿಂಗಿ ಅಥ್ಲೀಟ್ ಸ್ಪರ್ಧೆ

ಶಾಟ್ ಪುಟರ್ ತೇಜಿಂದರ್ ಪಾಲ್ ಸಿಂಗ್ ಗೆ ಒಲಿಂಪಿಕ್ಸ್ ಆರ್ಹತೆ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!