Friday, May 20, 2022

ಯೆಸ್ ಬ್ಯಾಂಕ್ ಕೇಸ್; ಇಡಿಯಿಂದ 127 ಕೋಟಿ ಮೌಲ್ಯದ ಆಸ್ತಿ ಜಪ್ತಿ

Follow Us

newsics.com
ನವದೆಹಲಿ: ಯೆಸ್ ಬ್ಯಾಂಕ್ ಸಹ ಪ್ರವರ್ತಕ ರಾಣಾ ಕಪೂರ್ ಅವರ ಲಂಡನ್’ನ ಸೌತ್ ಆಡ್ಲೆ ಸ್ಟ್ರೀಟ್’ನ ₹127 ಕೋಟಿ ಮೌಲ್ಯದ ಫ್ಲ್ಯಾಟ್ ಅನ್ನು ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿದೆ.
ಈ ಆಸ್ತಿಯನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್’ಎ) ಅಡಿ ಮುಟ್ಟುಗೋಲು ಹಾಕಿಕೊಳ್ಳಲು ತಾತ್ಕಾಲಿಕ ಆದೇಶ ನೀಡಿದೆ. ‘ಫ್ಲ್ಯಾಟ್ ನ ಮಾರುಕಟ್ಟೆ ಮೌಲ್ಯವು 13.5 ಮಿಲಿಯನ್ ಪೌಂಡ್ (ಸುಮಾರು ₹127 ಕೋಟಿ). 2017ರಲ್ಲಿ ರಾಣಾ ಕಪೂರ್ ಅವರು DOIT ಕ್ರಿಯೇಷನ್ಸ್ ಜರ್ಸಿ ಲಿಮಿಟೆಡ್ ಹೆಸರಿನಲ್ಲಿ 9.9 ಮಿಲಿಯನ್ ಪೌಂಡ್ ಗೆ ಈ ಆಸ್ತಿಯನ್ನು ಖರೀದಿಸಿದ್ದು, ಅವರು ಲಾಭದಾಯಕ ಮಾಲೀಕರೂ ಆಗಿದ್ದಾರೆ ಎಂದು ಇ.ಡಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇಡಿಯಿಂದ ಕಣ್ವ ಗ್ರೂಪ್ ಆಸ್ತಿ ಮುಟ್ಟುಗೋಲು

ಈ ಆಸ್ತಿಯನ್ನು ಮಾರಾಟ ಮಾಡಲು ಕಪೂರ್ ಯತ್ನಿಸುತ್ತಿದ್ದ ಹಿನ್ನೆಲೆಯಲ್ಲಿ ಪಿಎಂಎಲ್ ಎ ಅಡಿಯಲ್ಲಿ ಇತರ ತನಿಖೆಗಳ ಭಾಗವಾಗಿ, ಈ ಹಿಂದೆ ಅಮೆರಿಕ, ದುಬೈ ಮತ್ತು ಆಸ್ಟ್ರೇಲಿಯಾಗಳಲ್ಲಿ ಇದೇ ರೀತಿ ಆಸ್ತಿಗಳನ್ನು ಇಡಿ ಜಪ್ತಿ ಮಾಡಿದೆ.
ಈ ಪ್ರಕರಣದಲ್ಲಿ ರಾಣಾ ಕಪೂರ್, ಕಪಿಲ್ ವಧವನ್ ಮತ್ತು ಧೀರಜ್ ವಧವನ್ ಅವರನ್ನು ಇಡಿ ಈಗಾಗಲೇ ಬಂಧಿಸಿದ್ದು, ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

newsics.com ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ...

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900 ರೂ. ಏರಿಕೆಯಾಗಿದೆ. ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ...
- Advertisement -
error: Content is protected !!