Saturday, April 17, 2021

ನೀವಿನ್ನು ರೈಲಲ್ಲಿ ನಿಮ್ಮಿಷ್ಟದ ಸಂಗೀತ, ಸಿನೆಮಾ  ಸವಿಯಬಹುದು!

newsics.com
ನವದೆಹಲಿ: ನೀವಿನ್ನು ರೈಲಿನಲ್ಲಿ ಪ್ರಯಾಣಿಸುವಾಗಲೂ ನಿಮಗೆ ಬೇಕಾದ ಸಂಗೀತ ಕೇಳುತ್ತಾ, ಸಿನಿಮಾ, ವಿಡಿಯೋಗಳನ್ನು ನೋಡುತ್ತಾ ಖುಷಿಪಡಬಹುದು.
ತನ್ನ ಪ್ರಯಾಣಿಕರಿಗೆ ಇಂತಹದೊಂದು ಹೆಚ್ಚುವರಿ ಸೇವೆ ಒದಗಿಸಲು ಭಾರತೀಯ ರೈಲ್ವೆ ಮುಂದಾಗಿದೆ‌
ರೈಲುಗಳಲ್ಲಿ ಪ್ರಯಾಣಿಕರಿಗೆ ಬೇಡಿಕೆಯ ಅನುಸಾರ ಚಲನಚಿತ್ರ, ಸುದ್ದಿ, ವಿಡಿಯೋಗಳನ್ನು ವಿವಿಧ ಭಾಷೆಗಳಲ್ಲಿ ಪ್ರದರ್ಶಿಸಲು ಚಿಂತನೆ ನಡೆದಿದೆ.
ಸಂಗೀತ, ಸಿನಿಮಾ, ಸಾಮಾನ್ಯ ಮನರಂಜನೆ, ಸುದ್ದಿ ಸೇರಿದಂತೆ ವಿವಿಧ ಭಾಷೆಗಳ ವಿಡಿಯೋಗಳನ್ನು ರೈಲುಗಳಲ್ಲಿ ಪ್ರದರ್ಶಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಮೀಡಿಯಾ ಸರ್ವರ್’ಗಳನ್ನು ಬೋಗಿಗಳ ಒಳಗೆ ಇರಿಸಲಾಗುವುದು ಎಂದು ರೈಲ್ವೆ ಸಿಎಂಡಿ ಪುನೀತ್ ಚಾವ್ಲಾ ತಿಳಿಸಿದ್ದಾರೆ.
5723 ಉಪನಗರ ರೈಲುಗಳು, 5952 ಹೆಚ್ಚು ವೈಫೈ ಸೌಲಭ್ಯ ಹೊಂದಿದ ರೈಲು ನಿಲ್ದಾಣಗಳು  ಸೇರಿದಂತೆ 8731 ರೈಲುಗಳಲ್ಲಿ ಈ ಸೇವೆ ಒದಗಿಸಲಾಗುವುದು. ದೆಹಲಿಯಲ್ಲಿ ಪೈಲೆಟ್ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!