newsics.com
ಕೊಲ್ಲಂ: ಕೇರಳದ ಕೊಲ್ಲಂನಲ್ಲಿ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಮಗು ಸಾವನ್ನಪ್ಪಿದ ಕಾರಣ ಯುವ ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತಪಟ್ಟ ವೈದ್ಯರನ್ನು ಅನೂಪ್ ಎಂದು ಗುರುತಿಸಲಾಗಿದೆ. ಏಳು ವರ್ಷದ ಮಗುವಿನ ಶಸ್ತ್ರಚಿಕಿತ್ಸೆ ಇತ್ತೀಚೆಗೆ ನಡೆದಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾಗದೆ ಮಗು ಸಾವನ್ನಪ್ಪಿತ್ತು.
ಈ ಘಟನೆ ಸಂಭವಿಸಿದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈದ್ಯ ಅನೂಪ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಲಾಗಿತ್ತು ಎಂದು ಆರೋಪಿಸಲಾಗಿದೆ. ಇದರಿಂದ ಮಾನಸಿಕ ಒತ್ತಡಕ್ಕೆ ಸಿಲುಕಿದ್ದ ವೈದ್ಯ ಅನೂಪ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೇರಳದ ವೈದ್ಯರ ಸಂಘಟನೆ ಈ ಕುರಿತು ಆತಂಕ ವ್ಯಕ್ತಪಡಿಸಿದೆ. ವೈದ್ಯರನ್ನು ಗುರಿಯಾಗಿರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡದಂತೆ ಮನವಿ ಮಾಡಿದೆ.
ಕೊರೋನಾದಿಂದ ತಂದೆ ಸಾವು; ವೈದ್ಯರ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿ