Sunday, December 5, 2021

ಜೈಪುರ ಪ್ರಾಧಿಕಾರ ವಿರುದ್ಧ ‘ಜಮೀನ್ ಸಮಾಧಿ ಸತ್ಯಾಗ್ರಹ’

Follow Us

ಜೈಪುರ: ಭೂಸ್ವಾಧೀನ ಮಾಡಿರುವ ವಸತಿ ಯೋಜನೆಗಾಗಿ ಜೈಪುರ ಅಭಿವೃದ್ಧಿ ಪ್ರಾಧಿಕಾರ (ಜೆಡಿಎ) ಕ್ರಮ ವಿರೋಧಿಸಿ ರಾಜಸ್ಥಾನದ ನಿಂದಾರ್ ಗ್ರಾಮದ ರೈತರು ‘ಜಮೀನ್ ಸಮಾಧಿ ಸತ್ಯಾಗ್ರಹ’ (ಅರ್ಧ ದೇಹದ ಸಮಾಧಿ) ನಡೆಸುತ್ತಿದ್ದಾರೆ.
ಐವರು ಮಹಿಳೆಯರೂ ಸೇರಿ 51 ರೈತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಗುಂಡಿ ತೋಡಿ ಅದರಲ್ಲಿ ಹೂತು ಅರ್ಧ ಸಮಾಧಿ ಮಾಡಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ.
ಭೂಸ್ವಾಧೀನ ತಿದ್ದುಪಡಿ ಕಾಯ್ದೆಯ ಪ್ರಕಾರವೇ ತಮ್ಮ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ಅದಕ್ಕೆ ತಕ್ಕಂತೆ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ. ಕಳೆದ ಜನವರಿಯಲ್ಲೂ ರೈತರು ‘ಜಮೀನ್ ಸಮಾಧಿ ಸತ್ಯಾಗ್ರಹ’ ನಡೆಸಿದ್ದರು.
ಜೆಡಿಎ 600 ಬಿಘಾ (375 ಎಕರೆ) ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ಪರಿಹಾರವಾಗಿ ಸ್ಥಳೀಯ ನ್ಯಾಯಾಲಯದಲ್ಲಿ 60 ಕೋಟಿ ರೂ. ಜಮೆ ಮಾಡಿದೆ. ಆದರೆ ಚಾಲ್ತಿಯಲ್ಲಿರುವ ಮಾರುಕಟ್ಟೆ ದರಗಳಿಗೆ ಪರಿಹಾರ ಅನುಗುಣವಾಗಿಲ್ಲ ಎಂದು ಗ್ರಾಮಸ್ಥರು ಈ ಮೊತ್ತವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. 2011ರ ಗೃಹ ಯೋಜನೆ ಮೂಲಕ ಸುಮಾರು 10 ಸಾವಿರ ಮನೆಗಳನ್ನು ನಿರ್ಮಿಸುವ ಗುರಿಯನ್ನು ಜೆಡಿಎ ಹೊಂದಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!