Newsics. Com
ಬೆಂಗಳೂರು: 2022-23ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪ್ರಕಟಿಸಿದೆ.
2022-23ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪ್ರಕಟಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಒಟ್ಟು 67ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ನವೆಂಬರ್ 1 ರಂದುರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಜೊತೆಗೆ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ 10 ಸಂಘ-ಸಂಸ್ಥೆಗಳನ್ನೂ ಸರ್ಕಾರ ಗುರುತಿಸಿದೆ.
ಈ ಬಾರಿ ಪದ್ಮ ಪ್ರಶಸ್ತಿ ಮಾದರಿಯಲ್ಲಿರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಮಾಡಲಾಗಿದ್ದು, ಸಾಮಾನ್ಯರಾಗಿದ್ದುಕೊಂಡು ಅಸಾಮಾನ್ಯ ಕೆಲಸ ಮಾಡಿದವರು, ಸಮಾಜದ ನಾನಾ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದವರು, ತೆರೆಮರೆಯಲ್ಲಿದ್ದ ಅರ್ಹ ಸಾಧಕರು, ಸಮಾಜದ ಹಿತಕ್ಕಾಗಿ ಗಣನೀಯ ಸೇವೆ ಸಲ್ಲಿಸಿದ ಹತ್ತು ಸಂಘ-ಸಂಸ್ಥೆಗಳನ್ನು ಸರಕಾರ ಗುರುತಿಸಿದೆ.
ಇಸ್ರೋ ಮಾಜಿ ನಿರ್ದೇಶಕ ಶಿವನ್, ಹಿರಿಯ ಸಾಹಿತಿ ಅ.ರಾ.ಮಿತ್ರ, ಪ್ರೊ.ಕೃಷ್ಣಗೌಡ, ‘ಇಂಗ್ಲೀಷ್ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಡಾಪಟು ರಾಘವೇಂದ್ರ ಅಣೇಕರ್, ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್, ಸೋಲಿಗ ಸಮುದಾಯದಲ್ಲಿ ಸಹಕಾರದ ಬೆಳಕು ಚೆಲ್ಲಿದ ಸೋಲಿಗರ ಮಾದಮ್ಮ, ವನಸಂರಕ್ಷಣೆಗಾಗಿ ಜೀವನವನ್ನೇ ಮುಡುಪಾಗಿಟ್ಟ ರಾಮನಗರದ ಸಾಲುಮರದ ನಿಂಗಣ್ಣ, ಹಿರಿಯ ಚಲನಚಿತ್ರನಟರಾದ ದತ್ತಣ್ಣ, ಅವಿನಾಶ್, ಪೌರ ಸೇನಾನಿ ಶ್ರೀಮತಿ ಮಲ್ಲಮ್ಮ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ, ಕಿರುತೆರೆ ನಟ ಸಿಹಿಕಹಿ ಚಂದ್ರು, ಯಕ್ಷಗಾನ : ಯಕ್ಷಗಾನ ತಾಳಮದ್ದಳೆ ಕ್ಷೇತ್ರದ ಪ್ರಸಿದ್ಧ ಅರ್ಥಧಾರಿ ಡಾ. ಎಂ.ಪ್ರಭಾಕರ ಜೋಷಿ (ಉಡುಪಿ), ಬಡಗುತಿಟ್ಟಿನ ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ(ಉತ್ತರ ಕನ್ನಡ), ತೆಂಕು ತಿಟ್ಟಿನ ಹಿರಿಯ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ(ದಕ್ಷಿಣ ಕನ್ನಡ), ಬಡಗುತಿಟ್ಟಿನ ಪ್ರಸಿದ್ಧ ಸ್ತ್ರೀ ಪಾತ್ರಧಾರಿ ಎಂ. ಎ. ನಾಯ್ (ಉಡುಪಿ) ಅವರಿಗೆ ಪ್ರಶಸ್ತಿ ಒಲಿದು ಬಂದಿದೆ.