ಕರ್ನಾಟಕದ ವಿವಿಧ ಜಿಲ್ಲೆಗಳ ಸಾವಿರಾರು ಜನರ ಕಣ್ಣೀರಿಗೆ ಕಾರಣವಾಗಿದ್ದ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಖಾನಾಪುರ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಪತಿ ಹೇಮಂತ್ ನಿಂಬಾಳ್ಕರ್ ಹಾಗೂ ಇನ್ನೋರ್ವ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ವಿರುದ್ಧ ತನಿಖೆ ಹಾಗೂ ಕ್ರಮಕ್ಕೆ ಅನುಮತಿ ನೀಡಿದೆ.
ಕರ್ನಾಟಕ ಪೊಲೀಸ್ ಕಾಯಿದೆಯ ಸೆಕ್ಷನ್ 170 ಹಾಗೂ ಸೆಕ್ಷನ್ 197 ರ ಅಡಿಯಲ್ಲಿ ತನಿಖೆ ನಡೆಸಿ ಕ್ರಮಕೈಗೊಳ್ಳಲು ಅನುಮತಿ ನೀಡಿದೆ. ಐಎಂಎ ಜುವೆಲ್ಲರಿ ನಡೆಸುತ್ತಿದ್ದ ಮನ್ಸೂರ್ ಅಲಿ ಖಾನ್ ತನ್ನ ಸಾವಿರಾರು ಗ್ರಾಹಕರಿಗೆ ವಂಚಿಸಿ ಪರಾರಿಯಾಗಿದ್ದು ಬೆಳಕಿಗೆ ಬಂದಿತ್ತು. ಈ ಪ್ರಕರಣದ ತನಿಖೆ ವೇಳೆ ಹಲವು ಐಪಿಎಸ್ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಮನ್ಸೂರ್ ಅಲಿ ಖಾನ್ ರಿಂದ ಕಿಕ್ ಬ್ಯಾಕ್ ಸ್ವೀಕರಿಸಿದ್ದರು ಎಂಬ ಆರೋಪ ಕೂಡ ಕೇಳಿಬಂದಿತ್ತು.
ಐಎಂಎ ಪ್ರಕರಣದಲ್ಲಿ ಇಬ್ಬರು ಐಪಿಎಸ್ ಗಳ ವಿರುದ್ಧ ತನಿಖೆಗೆ ಸರ್ಕಾರ ಅನುಮತಿ
Follow Us