ಬೆಂಗಳೂರು: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕ್ರಮಕ್ಕೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ಸ್ಥಿರ ಸರ್ಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಪೂರ್ಣ ಗಮನವನ್ನು ಆಡಳಿತ ಸುಧಾರಣೆಯತ್ತ ನೀಡಲು ಸಿಎಂ ನಿರ್ಧರಿಸಿದ್ದಾರೆ. ಇಂದು ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು ಮತ್ತು ಹೆಚ್ಚುವರಿ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ. ಮುಖ್ಯವಾಗಿ ಪ್ರವಾಹ ಮತ್ತು ಬರ ಪರಿಸ್ಥಿತಿ ನಿರ್ವಹಣೆ ಕುರಿತಂತೆ ಸಭೆಯಲ್ಲಿ ಗಂಭೀರ ಚರ್ಚೆ ಮತ್ತು ಅವಲೋಕನ ನಡೆಯುವ ಸಾಧ್ಯತೆಗಳಿವೆ.