ಮಂಗಳೂರು: ಗಲಭೆಯಲ್ಲಿ ಭಾಗಿಯಾಗಿರುವುದು ಸಾಬೀತಾದರೆ ಗೋಲಿಬಾರ್ ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ನಯಾಪೈಸೆ ಪರಿಹಾರವನ್ನೂ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಗಲಭೆಯಲ್ಲಿ ಪಾಲ್ಗೊಂಡಿರುವುದು ದೃಢಪಟ್ಟರೆ ಪರಿಹಾರ ಘೋಷಣೆಯನ್ನು ಹಿಂಪಡೆಯುವುದಾಗಿ ತಿಳಿಸಿದರು.
ಗಲಭೆ ಪೂರ್ವನಿಯೋಜಿತ ಎಂಬುದಕ್ಕೆ ಸಾಕ್ಷಿಯಾಗಿ ಸಿಸಿಟಿವಿ ಕ್ಯಾಮರಾ ದೃಶ್ಯಗಳನ್ನು ಮಂಗಳೂರು ಪೊಲೀಸರು ಫೇಸ್ಬುಕ್ ಪೇಜ್ನಲ್ಲಿ ಪೋಸ್ಟ್ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮೃತರ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಗೋಲಿಬಾರ್ ಗೆ ಜಲೀಲ್ ಕುದ್ರೋಳಿ(49) ಮತ್ತು ನೌಶೀನ್ (23) ಎಂಬುವರು ಮೃತಪಟ್ಟಿದ್ದರು. ಬಳಿಕ ಮೃತರ ಕುಟುಂಬಕ್ಕೆ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿತ್ತು.