ಬೆಂಗಳೂರು: ಇಂಡಿಗೋ ವಿಮಾನ ವಿಳಂಬದಿಂದಾಗಿ ಮಂಗಳೂರಿಗೆ ತೆರಳಬೇಕಿದ್ದ ಪ್ರಯಾಣಿಕರು ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪರದಾಡುತ್ತಿದ್ದಾರೆ.
ಬೆಳಗ್ಗೆ 9:05ಕ್ಕೆ ಹೊರಡಬೇಕಿದ್ದ ಇಂಡಿಗೋ ಸಂಸ್ಥೆಯ ವಿಮಾನ ಮಧ್ಯಾಹ್ನ 12:20 ಕಳೆದರೂ ನಿಲ್ದಾಣಕ್ಕೆ ಆಗಮಿಸಿರಲಿಲ್ಲ. ಈ ಬಗ್ಗೆ ಪ್ರಶ್ನಿಸಿದ ಪ್ರಯಾಣಿಕರ ಜತೆಯೂ ಇಂಡಿಗೋ ಸಂಸ್ಥೆಯ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಪ್ರಯಾಣಿಕರು ದೂರಿದ್ದಾರೆ.