ಮಂಗಳೂರು: ವಿಶ್ವ ಹಿಂದೂ ಪರಿಷತ್ ನ ಕೇಂದ್ರೀಯ ವಿಶ್ವಸ್ತ ಮಂಡಳಿ ಮತ್ತು ಅಂತಾರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಬೈಠಕ್ ಬುಧವಾರ ಆರಂಭವಾಗಲಿದೆ. ಮಂಗಳೂರಿನ ಸಂಘ ನಿಕೇತನದಲ್ಲಿ ಈ ಸಭೆ ಆಯೋಜಿಸಲಾಗಿದೆ. ದೇಶ ವಿದೇಶಗಳ 400 ಪ್ರತಿನಿಧಿಗಳು ಇದರಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಡಿಸೆಂಬರ್ 30ರ ವರಗೆ ವಿಶ್ವ ಹಿಂದೂ ಪರಿಷತ್ ಸಭೆ ನಡೆಯಲಿದೆ