ಬೆಂಗಳೂರು: ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು ನಡೆಯಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆ ಹಲವು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಮುಖ್ಯವಾಗಿ ವಿಧಾನಸಭೆ ಜಂಟಿ ಅಧಿವೇಶನ ಮುಂದೂಡುವ ನಿರ್ಧಾರ ಪ್ರಕಟವಾಗುವ ನಿರೀಕ್ಷೆಯಿದೆ. ಜನವರಿ 20ರಿಂದ ವಿಧಾನಸಭೆ ಜಂಟಿ ಅಧಿವೇಶನ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಮುಖ್ಯಮಂತ್ರಿ ಬಿ ಎಸ್ ವೈ ಅವರ ಐರೋಪ್ಯ ದೇಶಗಳ ಪ್ರವಾಸ ಹಿನ್ನೆಲೆಯಲ್ಲಿ ಜನವರಿ 27ರಿಂದ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.