ಬೆಂಗಳೂರು; ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಮೇಲುಗೈ ಸಾಧಿಸಿದ್ದು, ಸರ್ಕಾರ ಸುಭದ್ರವಾಗಿಸುವ ಸಂತಸದಲ್ಲಿದೆ.
ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಶಿವರಾಮ್ ಹೆಬ್ಬಾರ್ , ಕೆ.ಆರ್.ಪೇಟೆಯಲ್ಲಿ ಬಿಜೆಪಿಯ ನಾರಾಯಣಗೌಡ , ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯ ಡಾ.ಕೆ.ಸುಧಾಕರ್, ಅಥಣಿಯಲ್ಲಿ ಮಹಾಶ್ ಕುಮಟಳ್ಳಿ, ಕೆ.ಆರ್. ಪೇಟೆಯಲ್ಲಿ ನಾರಾಯಣಗೌಡ, ಕಾಗವಾಡದಲ್ಲಿ ಶ್ರೀಮಂತ ಪಾಟೀಲ್, ರಾಣಿಬೆನ್ನೂರಿನಲ್ಲಿ ರಮೇಶ್ ಜಾರಕೀಹೊಳಿ, ಹಿರೇಕೇರೂರಿನಲ್ಲಿ ಬಿ.ಸಿ,ಪಾಟೀಲ್ ಗೆಲುವಿನ ನಗೆ ಬೀರಿದ್ದಾರೆ.
ಈ ಕುರಿತು ರಾಜ್ಯ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಹೊರಬೀಳಬೇಕಿದೆ. ಚಿಕ್ಕಬಳ್ಳಾಪುರದಲ್ಲಿ ಇದೇ ಮೊದಲ ಬಾರಿಗೆ ಕಮಲ ಅರಳಿದಂತಾಗಿದೆ.
ಹುಣಸೂರು ಕಾಂಗ್ರೆಸ್ ನ ಎಸ್.ಪಿ.ಮಂಜುನಾಥ್ 25,147 ಮತಗಳ ಅಂತರದಿಂದ ಭಾರಿ ಗೆಲುವು ದಾಖಲಿಸಿದ್ದು, ಅನರ್ಹ ಶಾಸಕ ಎಚ್. ವಿಶ್ವನಾಥ್ ಗೆ ಹೀನಾಯ ಸೋಲು ಎದುರಾಗಿದೆ.
ಯಶವಂತಪುರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮತ್ತೆ ಹಣಾಹಣಿ ಏರ್ಪಟ್ಟಿದ್ದು, ಬಿಜೆಪಿ ಮುನ್ನಡೆಯಲ್ಲಿದೆ.