ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ವಿಧಾನಸಭೆಯ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಮೊದಲಿಗೆ ಅಂಚೆ ಮತಗಳನ್ನು ಎಣಿಸಲಾಯಿತು. ಚಿಕ್ಕಬಳ್ಳಾಪುರದಲ್ಲಿ ಮೊದಲಿನ ಸುತ್ತಿನಲ್ಲಿ ಡಾ. ಸುಧಾಕರ್ ಮುನ್ನಡೆ ಸಾಧಿಸಿದ್ದಾರೆ. ಮಧ್ಯಾಹ್ನ 12 ಗಂಟೆಯ ಒಳಗೆ ಎಲ್ಲ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಗಳಿವೆ. ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ನಿವಾಸದಲ್ಲಿಯೇ ಇದ್ದು ಫಲಿತಾಂಶದ ಗಮನ ಹರಿಸುತ್ತಿದ್ದಾರೆ.