ಬೆಂಗಳೂರು: ಉಪಚುನಾವಣೆ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ತೀವ್ರ ಬಳಲಿದ್ದು ವೈದ್ಯರ ಸೂಚನೆ ಮೇರೆಗೆ ಅವರು 10ದಿನಗಳ ವಿಶ್ರಾಂತಿ ಪಡೆಯಲಿದ್ದಾರೆ. ಈ ಅವಧಿಯಲ್ಲಿ ಯಾವುದೇ ಪ್ರವಾಸ, ರಾಜಕೀಯ ನಾಯಕರು, ಸಾರ್ವಜನಿಕರ ಭೇಟಿ ಮಾಡದೇ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸೂಚಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯವಿರುವುದಿಲ್ಲ ಎಂದು ಕುಮಾರ ಸ್ವಾಮಿ ಕುಟುಂಬದ ಮೂಲಗಳು ತಿಳಿಸಿವೆ.
ಬಳಲಿಕೆ ಹಿನ್ನಲೆಯಲ್ಲಿ ಕುಮಾರಸ್ವಾಮಿ ಅವರು ಬುಧವಾರ ವೈದ್ಯರ ಸೂಚನೆ ಮೇರೆಗೆ ಹಲವು ತಪಾಸಣೆಗೆ ಒಳಪಟ್ಟರು. ರಕ್ತದಲ್ಲಿ ಸೋಂಕು ಉಂಟಾಗಿರುವುದು ಪರೀಕ್ಷಾ ವರದಿಗಳಿಂದ ಗೊತ್ತಾಗಿದೆ. ಹೀ ಗಾಗಿ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ.
ಎಚ್.ಡಿ ಕುಮಾರ ಸ್ವಾಮಿಗೆ ಹತ್ತು ದಿನ ವಿಶ್ರಾಂತಿ
Follow Us