ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಆದರೆ ಉಡುಗೊರೆಗಾಗಿ ಅವರು ಡಿಸೆಂಬರ್ 9 ರ ತನಕ ಕಾಯಬೇಕು. ರಾಜ್ಯದಲ್ಲಿ ಬಿಜೆಪಿ 6ಕ್ಕಿಂತ ಹೆಚ್ಚು ಸ್ಥಾನ ಗಳಿಸಿದರೆ ಅದೇ ಉಡುಗೊರೆ ಎಂದು ಪಕ್ಷದ ಕಾರ್ಯಕರ್ತರು ಮಾತನಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಅಲಂಕರಿಸಿದ ಬಳಿಕ ಮೊದಲ ಬಾರಿಗೆ ಕಟೀಲ್ ಚುನಾವಣೆ ಎದುರಿಸಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ನಡುವಿನ ಸಂಬಂಧ ಹಲವು ಚರ್ಚೆಗೆ ಕೂಡ ಗ್ರಾಸ್ತವಾಗಿತ್ತು.