ಬೆಂಗಳೂರು: ಕಡ್ಡಾಯ ಕನ್ನಡ ಕಲಿಕಾ ಅಧಿನಿಯಮದನ್ವಯ ರಾಜ್ಯದಲ್ಲಿ ಕನ್ನಡ ಭಾಷೆ ಬೋಧಿಸದ ಶಾಲೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಅಧಿನಿಯಮ 2015ರಲ್ಲೇ ಜಾರಿಯಾಗಿದ್ದರೂ 2017 – 18 ರಿಂದ ಕಟ್ಟುನಿಟ್ಟಾಗಿ ಎಲ್ಲಾ ಶಾಲೆಗಳು ಅನುಷ್ಠಾನಗೊಳಿಸಬೇಕಿತ್ತು. ಕೆಲ ಶಾಲೆಗಳು ಇದನ್ನು ಪಾಲಿಸುವ ಗೋಜಿಗೆ ಹೋಗಿಲ್ಲ. ಅಂತಹ ಶಾಲೆಗಳ ವಿರುದ್ಧ ಮುಂದಿನ ದಿನಗಳಲ್ಲಿ ಯಾವುದೇ ಮುಲಾಜಿಲ್ಲದೇ ಕ್ರಮ ಜರುಗಿಸುತ್ತೇವೆ ಎಂದಿದ್ದಾರೆ.
ಕನ್ನಡ ಬೋಧಿಸದ ಶಾಲೆಗಳ ವಿರುದ್ಧ ಕಠಿಣ ಕ್ರಮ: ಸುರೇಶ್ ಕುಮಾರ್
Follow Us