ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿರುವ ಏಸು ಪ್ರತಿಮೆ ನಿರ್ಮಾಣ ಸ್ಛಳಕ್ಕೆ ಗುರುವಾರ ಬಿಜೆಪಿ ನಿಯೋಗ ಭೇಟಿ ನೀಡಲಿದೆ. ಬಿಜೆಪಿ ನಾಯಕ ರವಿ ಕುಮಾರ್ ನೇತೃತ್ವದ ನಿಯೋಗ ಕಪಾಲ ಬೆಟ್ಟಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಲಿದೆ. ಏಸು ಪ್ರತಿಮೆ ವಿರುದ್ಧ ಬಿಜೆಪಿ ಧ್ವನಿ ಎತ್ತಿದ್ದು, ಕಾನೂನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದೆ. ಈ ಸಂಬಂಧ ಸಮಗ್ರ ವರದಿ ಸಲ್ಲಿಸುವಂತೆಯೂ ಜಿಲ್ಲಾಧಿಕಾರಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ