ಬೆಂಗಳೂರು: ವಿಧಾನಸಭೆ ಉಪ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನೂತನ ಸಾರಥಿಯ ಹುಡುಕಾಟ ಆರಂಭಿಸಿರುವ ಕಾಂಗ್ರೆಸ್, ಡಿಕೆ ಶಿವಕುಮಾರ್ ಹೆಸರನ್ನು ಬಹುತೇಕ ಅಂತಿಮ ಪಡಿಸಿದೆ ಎಂದು ಹೇಳಲಾಗುತ್ತಿದೆ. ಇದು ಸಿದ್ದರಾಮಯ್ಯ ಬಣದಲ್ಲಿ ಸ್ವಲ್ಪ ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಹೆಚ್ಚು ಕಡಿಮೆ ಹೈ ಕಮಾಂಡ್ ರೀತಿಯಲ್ಲಿ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ. ಡಿಕೆ ಶಿವಕುಮಾರ್ ಪಕ್ಷದ ಅಧ್ಯಕ್ಷ ರಾದರೆ ಅದಕ್ಕೆ ಅವಕಾಶ ಸಿಗದು ಎಂಬ ಆತಂಕ ಅವರ ಬೆಂಬಲಿಗರಲ್ಲಿ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಆಪ್ತರಾಗಿರುವ ಎಂ ಬಿ ಪಾಟೀಲ್ ಅವರ ಹೆಸರನ್ನು ತೇಲಿ ಬಿಡಲಾಗಿದೆ. ಸಂಕ್ರಾತಿಯ ಬಳಿಕ ನೂತನ ಅಧ್ಯಕ್ಷರ ನೇಮಕ ಬಹುತೇಕ ಖಚಿತವಾಗಿದೆ