ಬೆಂಗಳೂರು: ಕೆಪಿಸಿಸಿ ನೂತನ ಸಾರಥಿ ಆಯ್ಕೆ ಮಾತುಕತೆ ನಿರ್ಣಾಯಕ ಹಂತಕ್ಕೆ ತಲುಪಿದೆ. ಶನಿವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದು, ಈ ಸಂಬಂಧ ತಮ್ಮ ಅಭಿಪ್ರಾಯ ಮಂಡಿಸುವ ಸಾಧ್ಯತೆಗಳಿವೆ. ಡಿ ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಹುದ್ದೆಯ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದಾರೆ. ಸಿದ್ದರಾಮಯ್ಯ ಬಣ ಡಿ ಕೆ ಶಿವಕುಮಾರ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿದೆ ಎಂದು ಹೇಳಲಾಗುತ್ತಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದರೆ, ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಪದವಿಗೆ ಹಕ್ಕು ಮಂಡನೆ ಮಾಡಲಿದ್ದಾರೆ. ಇದರಿಂದ ಸಿಎಂ ಪಟ್ಟ ಕೈ ತಪ್ಪಲಿದೆ ಎಂಬುದೇ ಸಿದ್ದರಾಮಯ್ಯ ಬಣದ ಆತಂಕಕ್ಕೆ ಕಾರಣವಾಗಿದೆ