ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಿರುವ ಹೆಚ್ಚುವರಿ ನೆರೆ ಪರಿಹಾರ ಕುರಿತಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೊನೆಗೂ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಈ ಸಂಬಂಧ ಅವರು ಟ್ವೀಟ್ ಮಾಡಿದ್ದಾರೆ. ಯಡಿಯೂರಪ್ಪ ಈ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡದಿರುವುದು ವಿವಾದ ಹುಟ್ಟು ಹಾಕಿತ್ತು. ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಪ್ರಮಾಣಕ್ಕೆ ಅತೃಪ್ತಿ ಹೊಂದಿದೆ ಎಂಬ ಮಾತು ಹರಿದಾಡಿತ್ತು. ಇದೀಗ ಎಲ್ಲ ಸಂಶಯಕ್ಕೆ ಪೂರ್ಣ ವಿರಾಮ ಹಾಕಿರುವ ಯಡಿಯೂರಪ್ಪ, ಹಣ ಬಿಡುಗಡೆಯಿಂದ ಪರಿಹಾರ ಕಾರ್ಯಾಚರಣೆ ಚುರುಕುಗೊಳ್ಳಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.