ಉಡುಪಿ: ಹತ್ತನೇ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಮ್ಮೇಳನ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ಡಿ. 28, 29ರಂದು ನಡೆಯಲಿದೆ. ಕಾಳಾವರ ಎಂ. ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಸಮ್ಮೇಳನ ನಡೆಯಲಿದೆ. ಬ್ರಾಹ್ಮಣ ಸಮುದಾಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಸಮ್ಮೇಳನದಲ್ಲಿ ಚರ್ಚೆ ನಡೆಯಲಿದೆ.