ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಕ್ರಿಸ್ ಮಸ್ ಹಬ್ಬದ ಸಂಭ್ರಮ ಬಲು ಜೋರು. ಹಬ್ಬಕ್ಕೆ ಒಂದು ತಿಂಗಳು ಇರುವಾಗಲೇ ಸಿದ್ದತೆ ಆರಂಭವಾಗುತ್ತದೆ. ಕೊಲ್ಲಿ ರಾಷ್ಟ್ರಗಳಲ್ಲಿ ಮತ್ತು ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ಕೆಲಸ ಮಾಡುವ ಮಂಗಳೂರಿನವರು ಹೆಚ್ಚಿನ ಸಂಖ್ಯೆಯಲ್ಲಿ ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಆಗಮಿಸುತ್ತಾರೆ. ಕ್ರಿಸ್ ಮಸ್ ಹಬ್ಬ ಮಂಗಳೂರಿನಲ್ಲಿ ಹೆಚ್ಚು ಕಡಿಮೆ ಎಲ್ಲರ ಹಬ್ಬವಾಗಿದೆ. ಜಾತಿ ಧರ್ಮ ಮರೆತು ಎಲ್ಲರೂ ಈ ಹಬ್ಬದಲ್ಲಿ ಪಾಲ್ಗೊಳ್ಳುತ್ತಾರೆ. ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಾರೆ. ಆದರೆ
ಇದೀಗ ಕಡಲ ನಗರಿಯಲ್ಲಿ ನ ಹಿಂಸಾಚಾರ ಕ್ರಿಸ್ ಮಸ್ ಶಾಪಿಂಗ್ ಮೇಲೆ ತೀವ್ರ ಪರಿಣಾಮ ಬೀರಿದೆ. ನಗರದಲ್ಲಿ ಶೀಘ್ರ ಶಾಂತಿ ನೆಲಸಲಿ ಜನ ಜೀವನ ಸಹಜ ಸ್ಥಿತಿಗೆ ಮರಳಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.