ಬೆಂಗಳೂರು: ರಾಜ್ಯದಲ್ಲಿ ನಡೆದ ಉಪಚುನಾವಣೆಯ 15 ಕ್ಷೇತ್ರಗಳ ಪೈಕಿ 12ರಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಅಭ್ಯರ್ಥಿಗಳಿಗೆ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಫಲಿತಾಂಶದ ಬಳಿಕ ಪ್ರತಿಕ್ರಿಯಿಸಿದ
ಅವರು, ಸಚಿವರು, ಇನ್ನೆರಡು ದಿನಗಳಲ್ಲಿ
ದೆಹಲಿಗೆ ತೆರಳುತ್ತಿದ್ದು, ಮಂತ್ರಿಮಂಡಲ ವಿಸ್ತರಣೆ, ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಹಿರಿಯ ನಾಯಕರೊಂದಿಗೆ ಚರ್ಚಿಸುತ್ತೇನೆ. ತಾವು ಮಾತು ನೀಡಿದವರನ್ನು ಮಂತ್ರಿ ಮಾಡುವುದಾಗಿ ಯಡಿಯೂರಪ್ಪ ಸ್ಪಷ್ಟಪಡಿಸಿದರು.