
ಮಂಗಳೂರು: ಚಾರ್ಮಾಡಿ ಘಾಟ್‌ನಲ್ಲಿ ದಿನದ 24 ಗಂಟೆಯೂ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆದರೆ ಭಾರೀ ವಾಹನಗಳ ಸಂಚಾರ ನಿಷೇಧ ಮುಂದುವರಿಸಲಾಗಿದೆ.
ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನಗಳಿಗೆ ನ.28ರಿಂದ ದಿನದ 24 ಗಂಟೆಯೂ ಮುಕ್ತ ಪ್ರವೇಶವಿದೆ. ಆದರೆ ಎಲ್ಲ ರೀತಿಯ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಈ ಆದೇಶವು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಬುಧವಾರ ಆದೇಶ ಹೊರಡಿಸಿದ್ದಾರೆ.