ಬೆಂಗಳೂರು: ರಾಜ್ಯದಲ್ಲಿ ಪಿಯು ಪ್ರವೇಶದಲ್ಲಿ ಸೊನ್ನೆ ಸುತ್ತಿರುವ ಒಟ್ಟು 299 ಕಾಲೇಜುಗಳನ್ನು ರದ್ದುಪಡಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಪಟ್ಟಿ ಸಿದ್ದಪಡಿಸಲಾಗಿದ್ದು, ನೋಟಿಸ್ ಜಾರಿಗೊಳಿಸಲಾಗಿದೆ. ಬೆಂಗಳೂರು ದಕ್ಷಿಣದಲ್ಲಿ ಈ ಕಾಲೇಜುಗಳ ಸಂಖ್ಯೆ ಅಧಿಕವಾಗಿದೆ. ಇದರಲ್ಲಿ ಅನುದಾನ ಪಡೆಯುವ ಹಾಗೂ ಅನುದಾನ ರಹಿತ ಕಾಲೇಜುಗಳು ಕೂಡ ಸೇರಿವೆ. ರಾಜ್ಯದಲ್ಲಿ ಒಟ್ಟು 5397 ಪಿಯು ಕಾಲೇಜುಗಳಿವೆ. ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸ ಪಿಯು ಕಾಲೇಜುಗಳಿಗೆ ಅನುಮತಿ ನೀಡದಿರಲು ಕೂಡ ಸರ್ಕಾರ ನಿರ್ಧರಿಸಿದೆ.