ಬೆಂಗಳೂರು: ಭೂ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಹೈಕೋರ್ಟ್ ಕ್ಲೀನ್ ಚಿಟ್ ನೀಡಿದೆ.
ಬೆಳ್ತಂಗಡಿಯ ಜೆಎಂಎಫ್ ಸಿ ನ್ಯಾಯಾಲಯದ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸುವಂತೆ ಕೋರಿ ವೀರೇಂದ್ರ ಹೆಗ್ಗಡೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ಪೀಠ ಪ್ರಕರಣವನ್ನು ರದ್ದುಗೊಳಿಸಿದೆ.
ವೀರೇಂದ್ರ ಹೆಗ್ಗಡೆ ಅವರು 2012ರಿಂದ 1964ರ ಕರ್ನಾಟಕ ಭೂ ಸುಧಾರಣಾ ಕಾಯ್ದೆಯ ಮಿತಿಯನ್ನೂ ಮೀರಿ ಭೂಮಿ ಹೊಂದಿದ್ದಾರೆ ಎಂದು ಆಕ್ಷೇಪಿಸಿ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ನಿವಾಸಿ ರಂಜನ್ ರಾವ್ ಯೆರ್ದೂರ್ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು.