ಬೆಂಗಳೂರು: ವಿಧಾನಸಭೆ ಉಪ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲ 15 ಶಾಸಕರು ಡಿಸೆಂಬರ್ 22 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಬಿಜೆಪಿಯ 12, ಕಾಂಗ್ರೆಸ್ ನ ಇಬ್ಬರು ಮತ್ತು ಒರ್ವ ಪಕ್ಷೇತರ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಧಾನಸಭೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.